20.6 C
Bengaluru
Sunday, February 23, 2025

ಆರ್ ಎಸ್‌ಎಸ್ ಗೆ ನೀಡಿದ್ದ 35 ಎಕರೆ 33 ಗೋಮಾಳ ಜಮೀನು ಹಸ್ತಾಂತರ ಆದೇಶ ತಡೆಹಿಡಿದ ರಾಜ್ಯ ಕಾಂಗ್ರೆಸ್ ಸರ್ಕಾರ.

ಬೆಂಗಳೂರು ಜುಲೈ 14 : ಹಿಂದಿನ ಬಿಜೆಪಿ ಸರ್ಕಾರವು ಆರ್ ಎಸ್‌ಎಸ್ ಗೆ ಸೇರಿದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕುರುಬರಹಳ್ಳಿ ಗ್ರಾಮದ ತಾವರಕೆರೆ ಹೋಬಳಿಯಲ್ಲಿ 35 ಎಕರೆ 33 ಗುಂಟೆ ಗೋಮಾಳ ಜಮೀನನನ್ನು ನೀಡಿತ್ತು. ಆದರೆ ಆ ಆದೇಶವನ್ನು ಇದೀಗತಾನೆ ಹೊಸದಾಗಿ ರಚನೆಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಭೂಮಿ ಹಸ್ತಾಂತರಕ್ಕೆ ತಡೆ ನೀಡಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ ಎಸ್‌ಎಸ್ ಗೆ ಬಿಗ್ ಶಾಕ್ ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಆರ್ ಎಸ್‌ಎಸ್ಗೆ ನೀಡಿದ್ದ 35 ಎಕರೆ 33 ಗುಂಟೆ ಗೋಮಾಳ ಜಮೀನು ಹಸ್ತಾಂತರ ಆದೇಶಕ್ಕೆ ತಡೆ ನೀಡಿದೆ.

2023 ರ ಮೇ.22 ರಂದು ಜಿಲ್ಲಾಧಿಕಾರಿ ಗೋಮಾಳ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಜನಸೇವಾ ಟ್ರಸ್ಟ್ ಗೆ 35 ಎಕರೆ, 33 ಗುಂಟೆ ಭೂಮಿ ಮಂಜೂರು ಮಾಡುವುದನ್ನು ತಡೆಹಿಡಿಯಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

Related News

spot_img

Revenue Alerts

spot_img

News

spot_img