20.2 C
Bengaluru
Thursday, December 19, 2024

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

# state government # issued # circular saying # singing Nad Gita # not compulsory # private schools

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಮತ್ತೊಂದು ವಿವಾದ ಸೃಷ್ಟಿಸಿದೆ.ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ತಿಳಿದು ಬಂದಿದೆ. ಆದರೆ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಇದು ಕಡ್ಡಾಯವಾಗಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು (Govt Schools) ಮತ್ತು ಅನುದಾನಿತ ಶಾಲೆಗಳಲ್ಲಿ (Aided school) ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ವಿನಾಯ್ತಿ ನೀಡಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿಂದೆ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.ಸುತ್ತೋಲೆಯಲ್ಲಿ ‘ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ಬದಲಾಯಿಸಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥ ಬರುತ್ತದೆ. ಹಾಗೆಂದು, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿಲ್ಲ

Related News

spot_img

Revenue Alerts

spot_img

News

spot_img