#state government #ordered #transfer #IAS officers
ಬೆಂಗಳೂರು, ಸೆ.14: ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ.
*ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ರಾಜ್ಯಪತ್ರ ಇಲಾಖೆಯ ಮುಖ್ಯ ಸಂಪಾದಕಿಯಾಗಿ,
*ಹುದ್ದೆ ನಿಯೋಜನೆಗೆ ಕಾದಿದ್ದ ಪ್ರದೀಪ್ ಪಿ. ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ನಿರ್ದೇಶಕ,
*ಲತಾ ಕುಮಾರಿ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
*ಸಿ.ಎನ್.ಶ್ರೀಧರ ಅವರನ್ನು ಜವಳಿ ಅಭಿವೃದ್ಧಿ ಇಲಾಖೆಯ ಆಯುಕ್ತ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾಗಿ
*ಸಂಗಪ್ಪ ಅವರನ್ನು ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ(ಕಿಯೋನಿಕ್ಸ್)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
*ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರಾದೇಶಿಕ ವಲಯ ಆಯುಕ್ತ(ರಾಜರಾಜೇಶ್ವರಿ ನಗರ)ರಾಗಿ
*ರಾಜ್ಯ ರೇಷ್ಮೆ ಸಂಶೋಧನೆ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕಿ ಶ್ರೀರೂಪಾ ಅವರನ್ನು ರಾಜ್ಯ ಖನಿಜ ನಿಗಮದ ಕಾರ್ಯಕಾರಿ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.