ಬೆಂಗಳೂರು ಜು.12 : ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ವಿರೋಧ ಪಕ್ಷಗಳು ಇದನ್ನೇ ರಾಜಕೀಯ ಅಸ್ತ್ರವನ್ನಾಗಿಸಿಕೊಂಡು ಸದನದಲ್ಲಿ ಕೋಲಾಹಲ ಸೃಷ್ಟಿಸಿವೆ. ವರ್ಗಾವಣೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಪೆನ್‌ಡ್ರೈವ್‌ನ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಈ ನಡುವೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
*ಸಿದ್ದರಾಮಪ್ಪ, ಪೊಲೀಸ್ ಆಯುಕ್ತರು, ಬೆಳಗಾವಿ ನಗರಕ್ಕೆ ವರ್ಗ
*ವರ್ತಿಕಾ ಕಟಿಯಾರ್, ಎಸ್ಪಿ, ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗ
*ಸಿರಿಗೌರಿ, ಡಿಸಿಪಿ, ಆಡಳಿತ ವಿಭಾಗಕ್ಕೆ ವರ್ಗ
*ಅನೂಪ್ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿಗೆ ವರ್ಗ