ನವದೆಹಲಿ: ಸೆ.21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಕುರಿತಾಗಿ ರೈತ ಸಂಘ ದಾಖಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.21ಕ್ಕೆ ಮುಂದೂಡಿದೆ. ನ್ಯಾಯಧೀಶರಾದ ಗವಾಯಿ ಅವರ ದ್ವಿಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆಯು ಇಂದು ಬಂದಿತ್ತು. ನ್ಯಾ.ನರಸಿಂಹ ಅವರು ರಜೆಯಲ್ಲಿ ಇರುವ ಕಾರಣ ಪ್ರಕರಣದ ವಿಚಾರಣೆ ಸೆ.21 ಕ್ಕೆ ಮುಂದೂಡಲಾಗಿದೆ. KRSನಲ್ಲಿ ನೀರಿನ ಮಟ್ಟ ಕುಸಿದಿದೆ. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿವೆ.ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ಆರ್.ಗವಾಯಿ, ಒಬ್ಬರು ನ್ಯಾಯಮೂರ್ತಿ ರಜೆಯಲ್ಲಿದ್ದಾರೆ. ನಾನು ಮುಂದಿನ ವಾರ ವಿಚಾರಣೆಗೆ ಲಭ್ಯವಿಲ್ಲ. ಹೀಗಾಗಿ ಸಿಜೆಐ ಪೀಠದ ಮುಂದೆ ಹೋಗಿ ಹೊಸ ಪೀಠಕ್ಕೆ ಮನವಿ ಮಾಡಿ ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿಗೆ ಸೂಚಿಸಿದರು.ವಕೀಲರ ಮನವಿಗೆ ಸ್ಪಂದಿಸಿದ ನ್ಯಾ.ಬಿ.ಆರ್.ಗವಾಯಿ ಸೆ.21ರಂದು ವಿಚಾರಣೆ ನಡೆಸಲು ಸಮ್ಮತಿಸಿದರು. ಅಲ್ಲದೇ ಅಂದೆ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಅರ್ಜಿಯನ್ನೂ ಸಹ ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ.ಮುಂದಿನ ಹದಿನೈದು ದಿನಗಳಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಆದೇಶಿಸಿತ್ತು.