32.2 C
Bengaluru
Wednesday, April 17, 2024

ಮೂರು ಪ್ರಮುಖ ಸಂಹಿತೆಗಳು ಜುಲೈ.1ರಿಂದ ಜಾರಿ

ಬೆಂಗಳೂರು;ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ ಇದೇ ಜುಲೈ 1,2024 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರವು ಶನಿವಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21 ರಂದು ಸಂಸತ್ತಿನ ಅನುಮೋದನೆಯನ್ನು ಪಡೆದವು ಮತ್ತು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಡಿಸೆಂಬರ್ 25 ರಂದು ಒಪ್ಪಿಗೆ ನೀಡಿದರು.ಈ ಮೂಲಕ 2023ರ ಭಾರತೀಯ ಸಾಕ್ಷ್ಯ ಅಧಿನಿಯಮ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ನ್ಯಾಯ ಸಂಹಿತೆಗಳು 2024ರ ಜು.1ರಿಂದ ಜಾರಿಯಾಗಲಿವೆ ಎಂದು ಸ್ಪಷ್ಟಪಡಿಸಿದೆ. 1860ರಲ್ಲಿ ಜಾರಿಯಾಗಿದ್ದ ಇಂಡಿಯನ್ ಪೀನಲ್ ಕೋಡ್ ಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, 1872ರ ಭಾರತೀಯ ಸಾಕ್ಷ್ಯ ಕಾಯಿದೆ ಬದಲಾಗಿ ಭಾರತೀಯ ಸಾಕ್ಷ್ಯ ಅಧಿನಿಯಮ & 1973ರ CrPC ಬದಲಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯನ್ನು ಜಾರಿಗೆ ತರಲಾಗುತ್ತಿದೆ.ಈ ಮೂರು ಮಸೂದೆಗಳನ್ನು ಮೊದಲು ಆಗಸ್ಟ್ 2023 ರಲ್ಲಿ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪರಿಚಯಿಸಲಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವ್ಯಾಪಕ ಸಮಾಲೋಚನೆಯ ನಂತರ ಮಸೂದೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

Related News

spot_img

Revenue Alerts

spot_img

News

spot_img