# tricolor flag # fly from January 26 # tallest national flag# pole # Bangalore.
ಬೆಂಗಳೂರು;ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಗಣರಾಜ್ಯೋತ್ಸವ ದಿನಾಚರಣೆಗೆ(Republicday) ಸಿದ್ಧತೆ ಆರಂಭವಾಗಿದೆ. ಲಾಲ್‌ಬಾಗ್(Lalbagh) ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆದಿದೆ. ಇದೇ ಜನವರಿ 26 ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ (national flag)ಸ್ಥಂಭದಲ್ಲಿ ತ್ರಿವರ್ಣ ಧ್ವಜ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಹಾರಾಡಲಿದೆ,ಇದು ಸ್ಟಾರ್ ಆಕರ್ಷಣೆ ಆಗುವ ಸಾಧ್ಯತೆ ಇದೆ ಎಂದು TNIE ವರದಿ ಮಾಡಿದೆ.ಧ್ವಜಸ್ತಂಭವು ಒಟ್ಟು 19 ಟನ್ ತೂಕ ಇದೆ. ಡಿಸೆಂಬರ್‌ನಲ್ಲಿ ಪೈಲ್ ಫೌಂಡೇಶನ್ ಮಾಡಲಾಗಿದ್ದು, ಕ್ರೇನ್ ಬಳಸಿ ಬೃಹತ್ ಕಂಬವನ್ನು ನಿರ್ಮಿಸಲಾಗಿದೆ. ಧ್ವಜಸ್ತಂಭದ ಸುತ್ತ ಮತ್ತು ಕಾಂಕ್ರೀಟ್ ಮೆಟ್ಟಿಲುಗಳನ್ನು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಗಣರಾಜ್ಯೋತ್ಸವ ಮುನ್ನಾದಿನ ದಿನ ಇದನ್ನ ಪೂರ್ಣಗೊಳಿಸಲಾಗುವುದು.ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಂದು ಬೆಳಿಗ್ಗೆ 8-30 ಗಂಟೆಗೆ ಚಂದ್ರಾ ಬಡಾವಣೆಯ ಉದ್ಯಾನದಲ್ಲಿ ಈ ಬಾನೆತ್ತರದ ರಾಷ್ಟ್ರಧ್ವಜ ಸ್ಥಂಭವನ್ನು ಲೋಕಾರ್ಪಣೆ ಮಾಡಿ, ಪ್ರಪ್ರಥಮ ಬಾರಿಗೆ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಸಮಾರಂಭದ ಪ್ರಾರಂಭಕ್ಕೆ ಮುನ್ನ, ಬೆಳಿಗ್ಗೆ 7-30 ಗಂಟೆಗೆ, ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾದ್ಯಗೋಷ್ಠಿ-ಸಹಿತವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿವೆ.ಸಂವಿಧಾನದ ಆಶಯಗಳಾದ ದೇಶ ಪ್ರೇಮ, ದೇಶ ಭಕ್ತಿ, ಸೋದರತೆ ಮತ್ತು ಸಾಮರಸ್ಯವನ್ನು ಉಳಿಸಿ ಬೆಳೆಸಲು ಪ್ರೇರಣೆ ಮತ್ತು ಸ್ಫೂರ್ತಿ ನೀಡುವ ಈ ಸಮಾರಂಭದಲ್ಲಿ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.