22.8 C
Bengaluru
Thursday, June 20, 2024

ಮಹಿಳೆಯರೇ ಮೆಸೇಜ್ ಬಂದ್ರೂ,ಎಲ್ಲಾ ದಾಖಲೆ ನೀಡಿದ್ರೂ ದುಡ್ಡು ಬರದಿರಲು ಇದೇ ಕಾರಣ

Gruha Lakshmi Money: ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ ಬಗ್ಗೆ ಯಶಸ್ವಿ ಮೆಸೇಜ್ ಬಂದರೂ ಸುಮಾರು 10 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಎರಡು ಸಾವಿರ ರೂಪಾಯಿ ಹಣ ಜಮೆಯಾಗಿಲ್ಲ.ತಾಂತ್ರಿಕ ದೋಷದ ನೆಪದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಎರಡು ಸಾವಿರ ರೂಪಾಯಿ ಖಾತೆಗೆ ಜಮಾ ಆಗಿಲ್ಲ. ಇದರಿಂದಾಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಎಲ್ಲಾ ದಾಖಲೆಗಳನ್ನು(Documents) ನೀಡಿದ್ದೇವೆ. ಅರ್ಜಿ ಸಲ್ಲಿಕೆಯಲ್ಲಿ ಯಾವುದೇ ದೋಷವಿಲ್ಲ ಎಂದ ಮೆಸೇಜ್(Message) ಬಂದಿದೆ. ಆದ್ರೂ ನಮ್ಮ ಖಾತೆಗೆ ಎರಡು ಸಾವಿರ ರೂಪಾಯಿ ಹಣ ಬಂದಿಲ್ಲ ಎಂದು ಮಹಿಳೆಯರು ಹೇಳುತ್ತಿದ್ದಾರೆ.ಕುಟುಂಬದ ಯಜಮಾನರಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 9,44,155 ಅರ್ಜಿದಾರರ ಖಾತೆಗೆ ಹಣ ಸಂದಾಯವಾಗಿಲ್ಲ. ಇವರಲ್ಲಿ 3082 ಅರ್ಜಿದಾರರು ಮೃತಪಟ್ಟಿದ್ದು, ಅವರನ್ನು ಅನರ್ಹಗೊಳಿಸಲಾಗಿದೆ.

ಒಬ್ಬರ ಹೆಸರಿನಲ್ಲಿ ಮೂರ್ನಾಲ್ಕು ಬ್ಯಾಂಕ್ ಖಾತೆ(Bankaccount) ಹೊಂದಿದ್ದರೂ ಹಣ ಬಂದಿಲ್ಲ. ಇದರ ಜೊತೆಗೆ ಎರಡು ವರ್ಷಗಳಿಂದ ಬ್ಯಾಂಕ್ ಖಾತೆ ನಿರ್ವಹಣೆ ಮಾಡದೇ ಇರೋರಿಗೂ ಹಣ ಜಮೆ ಆಗಿಲ್ಲ. ಈ ರೀತಿಯ ಸಮಸ್ಯೆಗಳಿಂದ ಗೃಹಲಕ್ಷ್ಮಿಯರಿಗೆ ಹಣ ಜಮೆ ಆಗುತ್ತಿಲ್ಲ.1,59,356 ಮಹಿಳೆಯರ ಆಧಾರ್ ಮತ್ತು ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿದೆ. 5,96,68 ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ(Aadharlinking)ಯಾಗಿಲ್ಲ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. ಹೀಗೆ ವಿವಿಧ ಕಾರಣಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಸಂದಾಯವಾಗಿಲ್ಲ ಎಂದು ಹೇಳಲಾಗಿದೆ.ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. ಬಹುತೇಕರ ಖಾತೆಗೆ ಹಣ ಸಂದಾಯವಾಗಿದೆ. ಆದರೆ, ಅರ್ಜಿ ಸಲ್ಲಿಕೆ ಅನುಮೋದನೆಯಾಗಿ ಅರ್ಹರೆಂದು ದೃಢೀಕರಣ ಬಂದಿದ್ದರೂ 9.44 ಲಕ್ಷ ಮಂದಿಗೆ ಹಣ ಸಂದಾಯವಾಗಿಲ್ಲ. ಲೋಪ ದೋಷಗಳನ್ನು ಸರಿಪಡಿಸಿ ಖಾತೆಗೆ ಹಣ ಜಮಾ ಮಾಡುವ ಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

Related News

spot_img

Revenue Alerts

spot_img

News

spot_img