21.5 C
Bengaluru
Monday, December 23, 2024

ಇಂದು ರಾಜ್ಯಾದ್ಯ೦ತ ಏಕಕಾಲಕ್ಕೆ ಜನತಾದರ್ಶನ

ಬೆಂಗಳೂರು;ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಏಕಕಾಲಕ್ಕೆ ಜನತಾ ದರ್ಶನ ನಡೆಯಲಿದೆ. ಈ ವೇಳೆ ಡಿಸಿ, ಸಿಇಒ ಸೇರಿ ಎಲ್ಲಾ ಇಲಾಖೆಗಳ ಮುಖ್ಯ ಅಧಿಕಾರಿಗಳು ಹಾಜರಿರಲಿದ್ದು, ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ. ಸಾರ್ವಜನಿಕರು ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆ ಸೇರಿದಂತೆ ಇನ್ನಿತರೇ ಸಮಸ್ಯೆಗಳ ಬಗ್ಗೆ ಅಹವಾಲು ಸಾರ್ವಜನಿಕರು ತಮ್ಮ ಅಹವಾಲು ಹಿಡಿದು ಸಿಎಂ ಗೃಹ ಕಚೇರಿಗೆ ತೆರಳುವುದನ್ನು ತಪ್ಪಿಸಲು ಇನ್ಮುಂದೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಜನತಾದರ್ಶನ ನಡೆಸಲು ನಿರ್ಧರಿಸಲಾಗಿದೆ.

ಇಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೊದಲ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಇನ್ನು ಮುಂದೆ ಪ್ರತಿ ತಿಂಗಳು 25ರಂದು ಜಿಲ್ಲಾ ಉಸ್ತುವಾರಿ ಸಚಿವರು, 30ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ‘ಜನತಾದರ್ಶನ’ ನಡೆಸಿಕೊಡಲಿದ್ದಾರೆ,ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆ ಪರಿಹರಿಸಬೇಕೆಂಬ ಉದ್ದೇಶ ದಿಂದ ಜಿಲ್ಲಾಮಟ್ಟದ ಜನತಾದರ್ಶನಕ್ಕೆ ಸೋಮವಾರ ಅಧಿಕೃತ ಸಿಗಲಿದೆ.ಸೋಮವಾರ ಬೆಂಗಳೂರಿನ ಆನೇಕಲ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕು ಮಾರ್, ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್, ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಬಳ್ಳಾರಿಯಲ್ಲಿ ಬಿ. ನಾಗೇಂದ್ರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾದರ್ಶನ ನಡೆಯಲಿದೆ.ಜಿಲ್ಲಾಮಟ್ಟದ ಜನತಾದರ್ಶನದ ಬಳಿಕ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲೂಕನ್ನು ಆಯ್ಕೆ ಮಾಡಿಕೊಂಡು ತಾಲೂಕು ಮಟ್ಟದಲ್ಲಿ ಜನತಾದರ್ಶನವನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದ್ದಾರೆ. ಜನತಾ ದರ್ಶನ ಆರಂಭಕ್ಕೆ ಮುನ್ನ ಪ್ರಜಾಧ್ವನಿ ಆ್ಯಪ್​ ಸಿದ್ಧ ಮಾಡಲಾಗಿದೆ. ಜನತಾ ದರ್ಶನದಲ್ಲಿ ಬರುವ ಎಲ್ಲ ಅಹವಾಲುಗಳಿಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯ ಮೂಲಕವೇ ಪರಿಹಾರ ನೀಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಸರ್ಕಾರದಲ್ಲಿ ಈಗ ಐಪಿಜಿಆರ್​ಎಸ್ ಎಂಬ ಆಪ್ ಇದ್ದರೆ, ಇನ್ನೊಂದೆಡೆ ಇ- ಆಫೀಸ್ ತಂತ್ರಾಂಶ ಪ್ರತ್ಯೇಕವಾಗಿದೆ.

Related News

spot_img

Revenue Alerts

spot_img

News

spot_img