#Four#IPS #Officers #govt
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ವರ್ಗಾವಣೆಗೊಂಡ ನಾಲ್ವರು ಐಪಿಎಸ್(IPS) ಅಧಿಕಾರಿಗಳು
1,ಬೆಂಗಳೂರು ನಗರದ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಕಲಾ ಕೃಷ್ಣಸ್ವಾಮಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಬಿಎಂಟಿಸಿ (ಭದ್ರತೆ ಮತ್ತು ಜಾಗೃತ) ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
2,ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕಿ ದಿವ್ಯಾ ವಿ.ಗೋಪಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
3,ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
4.ಅಮಟೆ ವಿಕ್ರಮ್, ಐಪಿಎಸ್ (ಸೆಲೆಕ್ಟ್ ಲಿಸ್ಟ್ -2021) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ . ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾ ಗಿದೆ