Revenue Facts

ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯದೇ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ ;ಸರ್ಕಾರಕ್ಕೆ ಚು.ಆಯೋಗ ಖಡಕ್ ಸೂಚನೆ

ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯದೇ  ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ ;ಸರ್ಕಾರಕ್ಕೆ ಚು.ಆಯೋಗ ಖಡಕ್ ಸೂಚನೆ

ಬೆಂಗಳೂರು,ಮಾ.17;2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆಯು ಸನ್ನಿಹಿತವಾಗುತ್ತಿದ್ದು, ಭಾರತ ಚುನಾವಣಾ ಆಯೋಗವು ಸದ್ಯದಲ್ಲಿಯೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಈ ಹಂತದಲ್ಲಿ ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ ಸಿಬ್ಬಂದಿಗಳನ್ನು ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯದೆ ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿರುತ್ತದೆ.

ಶ್ರೀಮತಿ ವಂದನಾ ಶರ್ಮ ಭಾ.ಆ.ಸೇ.,ಸರ್ಕಾರದ ಮುಖ್ಯ ಕಾರ್ಯದರ್ಶಿ , ಕರ್ನಾಟಕ ಸರ್ಕಾರ ಇವರು ದಿನಾಂಕ: 15/03/2023 ರಂದು .ಇವರಿಗೆ ಬರೆದಿರುವ ಪತ್ರದನ್ವಯ,ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ ಸಿಬ್ಬಂದಿಗಳನ್ನು ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯದ ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿರುತ್ತದೆ.ಶ್ರೀಮತಿ ವಂದನಾ ಶರ್ಮ ರವರು , ದಿನಾಂಕ: 08/03/2023ರ ಅರೆ ಸರ್ಕಾರಿ ಪತ್ರದ ಮೂಲಕ ಎಲ್ಲಾ ವರ್ಗಾವಣೆ ಪ್ರಕ್ರಿಯೆಗಳಿಗೆ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯಲು ತಿಳಿಸಿದ್ದಾಗ್ಯೂ, ಹಲವು ಇಲಾಖೆಗಳು ಸದರಿ ನಿರ್ದೇಶನವನ್ನು ಪರಿಗಣಿಸದೇ ವರ್ಗಾವಣೆ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿವೆ.

ಎಲ್ಲಾ ರೀತಿಯ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆದು, ನಂತರ ವರ್ಗಾವಣೆ ಆದೇಶಗಳನ್ನು ಹೊರಡಿಸುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರಗಳಿಗೆ ಇಂದೇ ಸೂಕ್ತ ನಿರ್ದೇಶನ ನೀಡುವಂತೆ ಮತ್ತೊಮ್ಮೆ ಮನೋಜ್ ಕುಮಾರ್ ಮೀನ,ಭಾ.ಆ.ಸೇ. ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಇವರಿಗೆ ಕೋರಿರುತ್ತಾರೆ.

ಇನ್ನುಮುಂದೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರ ಕಛೇರಿಯ ಸಹಮತಿ ಪಡೆಯದೇ ವರ್ಗಾವಣೆ ಪ್ರಕ್ರಿಯೆ ಕೈಗೊಂಡಲ್ಲಿ ಅಂತಹ ಅಂಶಗಳನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲು ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ಮುಖ್ಯ ಚುನಾವಣಾಧಿಕಾರಿಯವರಿಗೆ ತಿಳಿಸಿರುತ್ತಾರೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಅಪಾರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿರವರಿಗೆ ಅನಧಿಕೃತ ಟಿಪ್ಪಣಿ ಮತ್ತು ಆದೇಶವನ್ನು ಸಿಬ್ಬಂದಿ ಇಲಾಖೆಯಿಂದ ಹೊರಡಿಸಿದ್ದಾರೆ.

Exit mobile version