24.1 C
Bengaluru
Sunday, July 7, 2024

ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು ಏ 24; ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಮಾವಂದಿರುವ ಸ್ಪರ್ಧಿಸುತ್ತಿರುವ ಕಾರಣಕ್ಕಾಗಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಭಾನುವಾರ ವರ್ಗಾವಣೆ ಮಾಡಲಾಗಿದೆ,ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಮತ್ತು ಪ್ರಾಂಶುಪಾಲರಾದ ಡಾ.ಅರುಣ್ ಕೆ ಅವರನ್ನು ದಾವಣಗೆರೆಯ ಎಸ್ಪಿಯಾಗಿ ನಿಯೋಜಿಸಲಾಗಿದೆ.ಬೆಂಗಳೂರು ವೈಟ್‌ ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಧರ್ಮೇಂದ್ರಕುಮಾರ್ ಮೀನಾ ಅವರನ್ನು ವರ್ಗಾಯಿಸಲಾಗಿದೆ.

ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಡಾ. ಕೆ. ಅರುಣ್ ಅವರನ್ನು ವರ್ಗಾವಣೆ ಮಾಡಲಾಗಿದೆ.‘ಗಿರೀಶ್ ಅವರ ಮಾವ ಕೆ.ಎನ್‌. ರಾಜಣ್ಣ, ಮಧುಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ರಿಷ್ಯಂತ್ ಅವರ ಮಾವ ಎಸ್. ಮುನಿರತ್ನ, ಬೆಂಗಳೂರು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.ಅಧಿಕಾರಿಗಳ ನೇರ ಸಂಬಂಧಿಗಳು ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img