Revenue Facts

ಮೈಸೂರು ಸೇರಿ ದೇಶದ 11 ನಗರಗಳಲ್ಲಿ ಟ್ರೂ 5ಜಿ ಸೇವೆ ಪ್ರಾರಂಭ

ಮೈಸೂರು ಸೇರಿ ದೇಶದ 11 ನಗರಗಳಲ್ಲಿ ಟ್ರೂ 5ಜಿ ಸೇವೆ ಪ್ರಾರಂಭ

Jio 5G Service: ಮೈಸೂರು ಸೇರಿ ದೇಶದ 11 ನಗರಗಳಲ್ಲಿ ರಿಲಯನ್ಸ್ ಜಿಯೋ ತನ್ನ ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸುವ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.ಇದಲ್ಲದೇ ದೇಶದ ಇತರ ಪ್ರಮುಖ ನಗರಗಳಾದ ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳನ್ನು ಆರಂಭಿಸಿತು.

1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ.ಸದ್ಯ ಇದು ಸಂಪೂರ್ಣವಾಗಿ ಆಹ್ವಾನಿತ ಸೇವೆಯಾಗಿದ್ದು ಅಂದರೆ Invite Only Basisನಲ್ಲಿ ಬಳಕೆದಾರರಿಗೆ ಲಭ್ಯವಿದೆಈ ಸೇವೆಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲ. 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಂ ಆಫರ್‌ ಪಡೆಯಬಹುದು. ಇನ್ನು ಈವರೆಗೆ ಯಾವುದೇ ಟೆಲಿಕಾಂ ಸಂಸ್ಥೆಗಳು 5 ಜಿ ಸೇವೆಯ ವೆಚ್ಚದ ಬಗ್ಗೆ ಇನ್ನು ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

“ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ ಎಂದರು.

ದೇಶದಲ್ಲಿ 5ಜಿ ಸ್ಪೆಕ್ಟ್ರಮ್ ಹರಾಜು ನಡೆದಿದ್ದು, ಜಿಯೋ ಅತಿ ಹೆಚ್ಚು ಬಿಡ್‌ ಮಾಡಿದೆ. ಏರ್‌ಟೆಲ್ ಮತ್ತು ವೊಡಾಫೋನ್ ನಂತರದ ಸ್ಥಾನದಲ್ಲಿವೆ. ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯಾ, ಅದಾನಿ ಡೇಟಾ ನೆಟ್‌ವರ್ಕ್‌ 5ಜಿ ಸ್ಪೆಕ್ಟ್ರಮ್‌ನ ಹರಾಜಿನಲ್ಲಿ ಭಾಗಿಯಾಗಿದೆ. ಅದಾದ ಬಳಿಕ 5ಜಿ ಸೇವೆಯನ್ನು ಭಾರತದಲ್ಲಿ ಅಕ್ಟೋಬರ್ 1ರಂದು ಜಾರಿಯೂ ಮಾಡಲಾಗಿದೆ.

5ಜಿ ನೆಟ್‌ವರ್ಕ್ 4ಜಿ ನೆಟ್‌ವರ್ಕ್‌ಗಿಂತಲೂ ಸ್ಪೀಡ್ ಆಗಿರುತ್ತದೆ. ನೀವು ಯಾವುದೇ ಸಿನಿಮಾ, ವಿಡಿಯೋ, ಆಪ್ ಡೌನ್‌ಲೋಡ್ ಅನ್ನು ಶೀಘ್ರವಾಗಿ ಮಾಡಲು ಸಾಧ್ಯವಾಗಲಿದೆ. ಇದು ಪ್ರತಿ ಸೆಕೆಂಡಿಗೆ 10 ಜಿಬಿ (gigabyte) ವೇಗದಲ್ಲಿ ಕಾರ್ಯನಿರ್ವಹಣೆ ಮಾಡಲಿದೆ.ಜಿಯೋ ಟ್ರೂ 5ಜಿ ತಂತ್ರಜ್ಞಾನದ ವೇರಿಯಂಟ್‌ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರಿಂದ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ.

 

Exit mobile version