ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರಿಂದ ಇದೀಗ ಪ್ರತಿ ಪಂಚಾಯತ್‌ಗೆ ಎರಡರಂತೆ 12 ಸಾವಿರ ಗುಂಪುಗಳನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಅದರಂತೆ ಸರ್ಕಾರದಿಂದ ಆದೇಶ ಹೊರಬಿದ್ದಿದೆ. ಸ್ತ್ರೀ ಶಕ್ತಿ ಗುಂಪುಗಳ ರೀತಿಯಲ್ಲೇ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 6 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕೂಡಲೇ ಯುವ ಸಂಘಗಳ ರಚಿಸಿ, ನೋಂದಣಿ ಮಾಡಿಸುವಂತೆ ಸಚಿವರು ಸೂಚಿಸಿದರು. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯಗಳ ರಚನೆ, ಪ್ರೋತ್ಸಾಹ ಧನ, ಉದ್ದೇಶದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಿ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪು ರಚಿಸುವುದಕ್ಕೆ ಆಸಕ್ತ ಯುವಜನರು ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು.
ಪ್ರತಿ ಗುಂಪಿಗೆ 10 ಸಾವಿರ ರೂಪಾಯಿ ಸುತ್ತುನಿಧಿ, ಒಂದು ಲಕ್ಷ ಸಬ್ಸಿಡಿಯೊಂದಿಗೆ ಐದು ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಸ್ಥಳೀಯ ಬೇಡಿಕೆಯನ್ನಾಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಯುವಕರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ. ಈ ಯೋಜನೆಯನ್ನು ನಮ್ಮ ಇಲಾಖೆ ನೇತೃತ್ವದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದರಂತೆ ಸುಮಾರು 28 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸೌಲಭ್ಯಗಳು,
*ಒಂದು ಲಕ್ಷ ರೂಪಾಯಿ ಸಹಾಯಧನದೊಂದಿಗೆ 5,00,000 ರೂಪಾಯಿ ಸಾಲ ಸೌಲಭ್ಯ
*ಸರ್ಕಾರದ ವತಿಯಿಂದ ಕೌಶಲಾಭಿವೃದ್ಧಿ, ಉದ್ಯಮಶೀಲತೆಗೆ ತರಬೇತಿ ಮತ್ತು ಬ್ಯಾಂಕ್ ಸಾಲ ಪಡೆಯಲು ಪ್ರೋತ್ಸಾಹ
*6 ತಿಂಗಳವರೆಗೆ ಸಾಲ ಮರುಪಾವತಿಗೆ ರಜಾ ಅವಧಿ
*ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಪ್ರೋತ್ಸಾಹ
*ಗ್ರಾಮೀಣ ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶ ಒದಗಿಸುವುದು.*ಒಂದು ಲಕ್ಷ ರೂಪಾಯಿ ಸಹಾಯಧನದೊಂದಿಗೆ 5,00,000 ರೂಪಾಯಿ ಸಾಲ ಸೌಲಭ್ಯ
*ಸರ್ಕಾರದ ವತಿಯಿಂದ ಕೌಶಲಾಭಿವೃದ್ಧಿ, ಉದ್ಯಮಶೀಲತೆಗೆ ತರಬೇತಿ ಮತ್ತು ಬ್ಯಾಂಕ್ ಸಾಲ ಪಡೆಯಲು ಪ್ರೋತ್ಸಾಹ
*6 ತಿಂಗಳವರೆಗೆ ಸಾಲ ಮರುಪಾವತಿಗೆ ರಜಾ ಅವಧಿ
*ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಪ್ರೋತ್ಸಾಹ
*ಗ್ರಾಮೀಣ ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶ ಒದಗಿಸುವುದು.