26.4 C
Bengaluru
Monday, December 23, 2024

ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣ : ಉಡುಪಿ, ಬೆಂಗಳೂರಿನಲ್ಲಿ ಪ್ರತಿಭಟನೆ

ಬೆಂಗಳೂರು;ಉಡುಪಿ ಜಿಲ್ಲೆಯ ಮೆಡಿಕಲ್ ಕಾಲೇಜಿನಲ್ಲಿ ನಡೆದ ಖಾಸಗಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿಯಿಂದ ಪ್ರತಿಭಟನೆ ನಡೆಯಿತು. ಉಡುಪಿಯ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ.ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸೂಕ್ತ ತನಿಖೆಗೆ ಆಗ್ರಹಿಸಿದರು.ಪ್ರತಿಭಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಮಚೀಂದ್ರ ಭೇಟಿ ನೀಡಿ ವಿದ್ಯಾರ್ಥಿಗಳ ಮನವಿ ಆಲಿಸಿದರು. ಮತ್ತೊಂದೆಡೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಯಿತು.ಇನ್ನು ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್​ ನಿವಾಸಕ್ಕೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸದಾಶಿವನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ‌ನ್. ರವಿಕುಮಾರ್ ಸೇರಿದಂತೆ ಮಹಿಳಾ ಬಿಜೆಪಿ ಕಾರ್ಯಕರ್ತರು, ಶಾಸಕ ಡಾ. ಅಶ್ವಥ್ ನಾರಾಯಣ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Related News

spot_img

Revenue Alerts

spot_img

News

spot_img