19.8 C
Bengaluru
Monday, December 23, 2024

ಜ.31ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ, ಫೆ.1ರಂದು ಬಜೆಟ್ ಮಂಡನೆ | Union Budget 2023

ಹೊಸದಿಲ್ಲಿ;ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ. 1ರಂದು ಕೇಂದ್ರ ಬಜೆಟ್‌ ಮಂಡಿಸಲಿದ್ದು, ಬಜೆಟ್‌ ಅಧಿವೇಶನದ ಮೊದಲ ಭಾಗದ ಕಲಾಪಗಳು ಫೆ. 10ರ ವರೆಗೆ ನಡೆಯಲಿವೆ.ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭ ಆಗುವ ಸಾಧ್ಯತೆ ಇದೆ. ಇನ್ನು ಮಧ್ಯೆ ವಿರಾಮದೊಂದಿಗೆ ಏಪ್ರಿಲ್ 6ರಂದು ಮುಕ್ತಾಯಗೊಳ್ಳುವ ನಿರೀಕ್ಷೆ ಇದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಜನವರಿ 2ರಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ, ವರದಿ ಮಾಡಿದೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಮುರ್ಮು ಅವರು ಉನ್ನತ ಹುದ್ದೆಗೆ ಏರಿದ ನಂತರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾಡುವ ಮೊದಲ ಭಾಷಣ ಇದಾಗಲಿದೆ.ಬಜೆಟ್ ಅಧಿವೇಶನದ ಮೊದಲ ದಿನವೇ ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಎಎನ್‌ಐ ವರದಿ ತಿಳಿಸಿದೆ.

ಇದು ಮೋದಿ 2.0 ಸರ್ಕಾರ ಮತ್ತು ಸೀತಾರಾಮನ್ ಅವರ ಐದನೇ ಬಜೆಟ್ ಆಗಿರುತ್ತದೆ ಮತ್ತು ಏಪ್ರಿಲ್-ಮೇ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಪೂರ್ಣ ಬಜೆಟ್ ಆಗಿದೆ.ಸ್ಥಾಯಿ ಸಮಿತಿಗಳು ವಿವಿಧ ಸಚಿವಾಲಯಗಳ ಅನುದಾನದ ಬೇಡಿಕೆಗಳ ಪರಿಶೀಲನೆ ಬಳಿಕ ಬಜೆಟ್ ಅಧಿವೇಶನದ ಎರಡನೇ ಭಾಗ ಮಾರ್ಚ್ 6 ರಂದು ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ, ಸರ್ಕಾರದ ಶಾಸಕಾಂಗ ಕಾರ್ಯಸೂಚಿಯನ್ನು ಹೊರತುಪಡಿಸಿ ವಿವಿಧ ಸಚಿವಾಲಯಗಳಿಗೆ ಅನುದಾನದ ಬೇಡಿಕೆಗಳ ಮೇಲಿನ ಚರ್ಚೆಯ ಮೇಲೆ ಪ್ರಮುಖ ಗಮನ ಹರಿಸಲಾಗಿದೆ. ಅಧಿವೇಶನದ ಈ ಭಾಗದಲ್ಲಿ ಕೇಂದ್ರ ಬಜೆಟ್, ಹಣದ ಮಸೂದೆಯನ್ನು ಅಂಗೀಕರಿಸಲಾಗುತ್ತದೆ.ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದರೆ, ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಹಣಕಾಸು ಸಚಿವರು ಉತ್ತರಿಸಲಿದ್ದಾರೆ.

Related News

spot_img

Revenue Alerts

spot_img

News

spot_img