ಬೆಂಗಳೂರು, ಮೇ. 13 : ರಾಜ್ಯದಲ್ಲಿ ಮತ ಎಣಿಕೆ ಮುಂದುವರೆದಿದ್ದು, ಆದರೆ, ಸ್ಪಷ್ಟ ಬಹುಮತದಿಂದ ಈಗಾಗಲೇ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಹೇಳಲಾಗುತ್ತಿದೆ. 224 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಪ್ರಕಟಗೊಳ್ಳಲಿದೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ಇತ್ತು. ಇದರಲ್ಲಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರ ಉಳ್ಳಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ. ಯುಟಿ ಖಾದರ್ ಅವರಿಗೆ ಜೆಡಿಎಸ್ ಅಭ್ಯರ್ಥಿ ಮೊಯಿನುದ್ದೀನ್ ಬಾವಾ ಈ ಬಾರಿ ಉಳ್ಳಾಲದ ಪ್ರಬಲ ಸ್ಪರ್ಧಿಯಾಗಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸದ್ದರು. ಇವರಿಬ್ಬರ ಎದು ಯುಟಿ ಖಾದರ್ ಗೆಲ್ಲುವ ಮೂಲಕ 5ನೇ ಬಾರಿಗೆ ಜಯಗಳಿಸಿದ್ದಾರೆ. ಯುಟಿ ಖಾದರ್ ಅವರು ಉಲ್ಲಾಳದಲ್ಲಿ ಬಹುಮತದಿಂದ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಇತ್ತೀಚಿನ ವರದಿಯ ಪ್ರಕಾರ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 65 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿರುವ ಜೆಡಿಎಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 4 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಈಗಾಗಲೇ ಎಕ್ಸಿಟ್ ಪೋಲ್ ಗಳಲ್ಲಿ ಕಾಂಗ್ರೆಸ್ ಗೆಲ್ಲಲ್ಲಿದೆ ಎಂದು ಹೇಳಲಾಗಿತ್ತು. ಇದೀಗ ಮತ ಎಣಿಕೆಯಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.