#visit #drought #affected #submit #report #CM
ಬೆಂಗಳೂರು: ಬರಪೀಡಿತ ಜಿಲ್ಲೆಗಳಲ್ಲಿ ಸಂಚರಿಸಿ, ಬರ ಪರಿಹಾರ(Drought relief)ಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿಗಳ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ(Stategovernment) ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಟೀಕಿಸಿದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎಲ್ಲಾ ಸಚಿವರಿಗೆ ಆಯಾ ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರೊಳಗೆ ವರದಿ ಸಲ್ಲಿಸುವಂತೆ ಆದೇಶ(order) ಹೊರಡಿಸಿದ್ದಾರೆ. ಕರ್ನಾಟಕವು 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.ಆದ್ದರಿಂದ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪುತಿ ತಾಲ್ಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ನೀಡಿ. ಪರಿಶೀಲಿಸುವುದು. ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವುದು. ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ, ಪ್ರತಿ ತಾಲ್ಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ದಿನಾಂಕ: 15.11.2023ರೊಳಗೆ ವರದಿ ನೀಡಲು ಕೋರಿದೆ ಆಂತ ತಿಳಿಸಿದ್ದಾರೆ.