ಬೆಂಗಳೂರು;ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಕಪ್ಪು ಬುರ್ಖಾ ಧರಿಸಿ, ಖಾಲಿ ಕೊಡವನ್ನು ತಲೆ ಮೇಲೆ ಇಟ್ಟುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು. ನಾವು ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ಬಿಡಲುಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಕನ್ನಡ ನಾಡಿಗಾಗಿ ಯಾವುದೇ ಹೋರಾಟವಿದ್ದರೂ ಹೋರಾಟಗಾರ ವಾಟಾಳ್ ನಾಗರಾಜ್ ವಿಭಿನ್ನವಾಗಿ ಪಾಲ್ಗೊಳ್ಳುತ್ತಾರೆ. ಕಾವೇರಿ ನೀರಿಗಾಗಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಕಾವೇರಿಗಾಗಿ ನಾವು ಕರ್ನಾಟಕ ಬಂದ್ ಮಾಡಿದರೆ, ಸರ್ಕಾರ ನಮ್ಮನ್ನು ಬಂದ್ ಮಾಡುತ್ತಿದೆ. ಈ ಹೋರಾಟ ಹತ್ತಿಕ್ಕುವ ಪ್ರಯತ್ನ ಸರ್ಕಾರ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಬಂದ್ ಭಾಗವಾಗಿ ಇಂದು ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ಮೈದಾನದವರೆಗೆ ಶಾಂತಿಯುತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಆದರೆ ಉದ್ದೇಶಪೂರಕವಾಗಿ 144 ಅಡಿಯಲ್ಲಿ ಜಾರಿಗೊಳಿಸಿ ಕನ್ನಡಪರ ಹೋರಾಟಗಾರರನ್ನು ಗುಂಪು, ಗುಂಪಾಗಿ ಬಂಧಿಲಾಗುತ್ತಿದೆ. ಇನ್ನು ಟೌನ್ ಹಾಲ್ ಬಳಿ ಆಗಮಿಸಿ ಪ್ರತಿಭಟನೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂಪಾರ್ಕ್ ಗೆ ಕರೆದೊಯ್ದರು.ಟೌನ್ ಹಾಲ್ ಬಳಿ ಆಗಮಿಸಿ ಪ್ರತಿಭಟನೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂಪಾರ್ಕ್ ಗೆ ಕರೆದೊಯ್ದರು.