21.8 C
Bengaluru
Friday, February 23, 2024

Lokayukta raid :ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಲೋಕಾ ಬಲೆಗೆ

ಚಿತ್ರದುರ್ಗ;ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಟಿ.ಲೀಲಾವತಿ ಹಾಗೂ ಬಿಲ್‌ ಕಲೆಕ್ಟರ್ ನಿಷಾಂತ್ 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಾಗರಾಜ್ ರವರು ಮನೆ ಖಾತೆ ಬದಲಾವಣೆಗೆ ಹಲವು ಬಾರಿ ನಗರಸಭೆಗೆ ಅಲೆದಾಡಿದರೂ ಪ್ರಯೋಜನವಾಗಿರಲಿಲ್ಲ. ಕೆಲಸ ಮಾಡಿಕೊಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 3 ಲಕ್ಷ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ನಿಶಾನಿ ಕಾಂತರಾಜ್ ಮೂಲಕ ಎಲ್‌ಪಿ ಡಾಬಾದ ಬಳಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಪೌರಾಯುಕ್ತೆ ಲೀಲಾವತಿ, ಬಿಲ್ ಕಲೆಕ್ಟರ್ (Bill Collector) ನಿಷಾಂತ್ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ,ಲೋಕಾಯುಕ್ತ ಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ.

Related News

spot_img

Revenue Alerts

spot_img

News

spot_img