ಬೆಂಗಳೂರು ;ಬೆಂಗಳೂರು ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್. ಇವರು ಬೆಸ್ಕಾಂನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಬುಧವಾರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರಿಗೆ ಆರೋಪಿ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ಕಸ್ತೂರಿನಗರ ಸಬ್ಡಿವಿಷನ್ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ.ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ.ವಿದ್ಯಾ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ.