26.4 C
Bengaluru
Wednesday, December 4, 2024

ಬೆಂಗಳೂರಿನ ‘ಬೆಸ್ಕಾಂ’ಕಾರ್ಯನಿರ್ವಾಹಕ ಎಂಜಿನಿಯರ್‌ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ

ಬೆಂಗಳೂರು ;ಬೆಂಗಳೂರು ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಇವರು ಬೆಸ್ಕಾಂನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಬುಧವಾರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರಿಗೆ ಆರೋಪಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ.ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ.ವಿದ್ಯಾ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ.

Related News

spot_img

Revenue Alerts

spot_img

News

spot_img