ಚಿಕ್ಕಮಗಳೂರು ;ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆ 8 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ,ಚಿಕ್ಕಮಗಳೂರು ಪುರಸಭೆಯ ಕಂದಾಯ ಅಧಿಕಾರಿ, ಗುಮಾಸ್ತ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ .ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.ಈ ವೇಳೆ ಬಲೆಗೆ ಸಾಕ್ಷ್ಯ ಸಮೇತ ಅಧಿಕಾರಿ ಮತ್ತು ಸಿಬ್ಬಂದಿ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ .ಲೋಕಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.