22.4 C
Bengaluru
Friday, November 22, 2024

ರೇರಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಯಾಕೆ ಆಗಿಲ್ಲ: ರಾಜ್ಯಗಳಿಗೆ ಸುಪ್ರೀಂ ಪ್ರಶ್ನೆ

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಸೇರಿದಂತೆ ದೇಶದ ಬೇರೆ ಬೇರೆ 11 ರಾಜ್ಯಗಳಲ್ಲಿ ರೇರಾ (ನಿಯಂತ್ರಣ ಹಾಗೂ ಅಭಿವೃದ್ಧಿ) ಕಾಯ್ದೆ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಪ್ರತಿಕ್ರಿಯೆಗಳನ್ನು ದಾಖಲಿಸಲು ಸಾಧ್ಯವಿಲ್ಲದಿದ್ದಲ್ಲಿ ಆಯಾ ರಾಜ್ಯಗಳ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಗಳ ಪ್ರಧಾನ ಕಾರ್ಯದರ್ಶಿಗಳು ಖುದ್ದು ಹಾಜರಾಗಿ ತಮ್ಮ ರಾಜ್ಯದ ರೇರಾ ಬೆಳವಣಿಗೆ ಬಗ್ಗೆ ವಿವರಿಸಬೇಕು ಎಂದು ಖಡಕ್ಕಾಗಿ ಸೂಚಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವೈ. ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರು, ಒಂದು ವೇಳೆ ರಾಜ್ಯ ಸರ್ಕಾರಗಳು ಪ್ರತಿಕ್ರಿಯೆಗಳನ್ನು ನೀಡಲು ವಿಫಲವಾದರೆ, ಆಯಾ ರಾಜ್ಯಗಳ ಸಂಬಂಧಿಸಿದ ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು. ಕಾನೂನು ಪ್ರಕಾರ ಕಾಯ್ದೆ ಅನುಷ್ಠಾನವನ್ನು ಯಾಕೆ ಮಾಡಿಲ್ಲ ಎಂಬುದನ್ನು ವಿವರಿಸಬೇಕು ಎಂದು ತಿಳಿಸಿದ್ದಾರೆ.

ಆಗಸ್ಟ್‌ 12ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೆಪ್ಟೆಂಬರ್‌ 2ರೊಳಗೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು. ಆಂಧ್ರಪ್ರದೇಶ, ಛತ್ತೀಸಗಢ, ಗುಜರಾತ್‌, ಜಾರ್ಖಂಡ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೀಜೋರಾಂ, ಒಡಿಶಾ, ಉತ್ತರಪ್ರದೇಶ ಹಾಗೂ ಪಶ್ಚಿಮಬಂಗಾಳ ರಾಜ್ಯಗಳು ಇದುವರೆಗೂ ತಮ್ಮ ಪ್ರತಿಕ್ರಿಯೆಯನ್ನು ಒದಗಿಸಿಲ್ಲ.

ಮುಂದಿನ ನಾಲ್ಕು ವಾರಗಳೊಳಗೆ ತಮ್ಮ ರಾಜ್ಯದಲ್ಲಿ ರೇರಾ ಕಾಯ್ದೆ ಅನುಷ್ಠಾನದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವಂತೆ ಅಥವಾ ತಪ್ಪಿದ್ದಲ್ಲಿ ವಿಚಾರಣೆ ಸಂದರ್ಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಗಳ ಪ್ರಧಾನ ಕಾರ್ಯದರ್ಶಿ ಖುದ್ದುಹಾಜರಾಗಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಮಾದರಿ ಬಿಲ್ಡರ್-ಖರೀದಿದಾರರ ಒಪ್ಪಂದ ಮತ್ತು ಮಾದರಿ ದಳ್ಳಾಲಿ-ಖರೀದಿದಾರರ ಒಪ್ಪಂದವನ್ನುತರಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ಅವರು ಸರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಗ್ರಾಹಕರ, ಖರೀದಿದಾರರ ಹಕ್ಕು ಹಾಗೂ ಆಸಕ್ತಿಗಳನ್ನು ಕಾಪಾಡುವ ಮನವಿ ಹೊಂದಿದೆ.

Related News

spot_img

Revenue Alerts

spot_img

News

spot_img