Revenue Facts

ಡಿ.4 ರಿಂದ 22ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

ಡಿ.4 ರಿಂದ 22ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

ಬೆಂಗಳೂರು;ಚಳಿಗಾಲದ ಸಂಸತ್ ಅಧಿವೇಶನ(Winter Parliament Session) ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಸುಗಮ ಕಲಾಪಕ್ಕಾಗಿ ಕೇಂದ್ರ ಮಾತುಕತೆ ನಡೆಸಲಿದೆ. ಈ ಐಪಿಸಿ, ಸಿಆರ್ಪಿಸಿ ಎವಿಡೆನ್ಸ್ ಆಕ್ಟ್ ಬದಲಿಸಲು ಬಯಸುವ 3 ಪ್ರಮುಖ ಮಸೂದೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಒಂದು ದಿನಕ್ಕೂ ಮುಂಚೆ ಸರ್ವಪಕ್ಷಗಳ ಸಭೆ ನಡೆಸಲು ನಿರ್ಧರಿಸಿರುವುದು ಗಮನಾರ್ಹ.ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದ್ದರೂ, ಡಿಸೆಂಬರ್ 3 ರಂದು ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ(Counting of votes) ನಡೆಯಲಿರುವ ಹಿನ್ನೆಲೆಯಲ್ಲಿ ಒಂದು ದಿನ ಮುಂದೂಡಲಾಗಿದೆ.ಡಿ.4ರಿಂದ 22ರವರೆಗೆ ನಡೆಯುವ ಚಳಿಗಾಲದ ಅಧಿವೇಶನದಲ್ಲಿ 15 ಸಭೆಗಳು ನಡೆಯಲಿವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.ಇನ್ನು ಅಧಿವೇಶನದಲ್ಲಿ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಹಿನ್ನಲೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ಅದೇ ರೀತಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ (Mahua Moitra) ವಿರುದ್ಧದ ಆರೋಪದ ಕುರಿತು ನೈತಿಕ ಸಮಿತಿಯ ವರದಿಯನ್ನು ಸಂಸತ್ತಿನ ಈ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾಗುವುದು.

Exit mobile version