ಬೆಂಗಳೂರು;ಬೆಂಗಳೂರಿನ ಶಿವಾಜಿನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಪಿಎಸ್ಐ (PSI), ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಪೂರ್ವ ವಿಭಾಗ ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆ ಪಿಎಸ್ಐ ಸವಿತಾ ಲೋಕಾಯುಕ್ತ ಬಲೆ ಬಿದ್ದ ಪಿಎಸ್ಐ ಆಗಿದ್ದಾರೆ.
ಆನಂದ್ ಕುಮಾರ್ ಎಂಬ ಆರೋಪಿಯ ಜಾಮೀನು ಅಂಗೀಕಾರ ಮಾಡಲು 50 ಸಾವಿರ ರೂಪಾಯಿಗೆ ಪಿಎಸ್ಐ ಸವಿತಾ ಬೇಡಿಕೆ ಇಟ್ಟಿದ್ದರಂತೆ. ಆದರೆ ಆತ 50 ಸಾವಿರ ಕೊಡಲು ಆಗುವದಿಲ್ಲ ಅಂತ ಹೇಳಿದಾಗ 20 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರಂತೆ.ಇದರಿಂದ ಆತ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಪಿಎಸ್ಐ ಅವರನ್ನು ಬಲೆಗೆ ಕೆಡವಿದ್ದಾರೆ. ಈ ಹಿನ್ನೆಲೆ ಬುಧವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಪಿಎಸ್ಐ ಸವಿತಾ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.