ಬೆಂಗಳೂರು: ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ.ಮತದಾರರ ಪಟ್ಟಿ ಸಿದ್ದತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದೆ.
ಶುಕ್ರವಾರ ಈ ಸಂಬಂಧ ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮೇ 29 ರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದೆ.ಜೂನ್ 4ರವರೆಗೆ ಈ ಕಾರ್ಯ ನಡೆಯಲಿದೆ.ಜೂನ್ 5 ರಿಂದ 13ರವರೆಗೆ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ನಡೆಯಲಿದೆ.ಜೂನ್ 14ರಿಂದ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು.ಜೂನ್ 19ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ.ಜೂನ್ 22 ರಂದು ಆಕ್ಷೇಪಣೆ ಸಲ್ಲಿಸಲು ಅಂತಿಮ ದಿನವಾಗಿದೆ.ಮತ್ತೊಮ್ಮೆ ಪರಿಶೀಲನೆ ಕಾರ್ಯ ಜೂನ್ 25 ರಂದು ನಡೆಸಲಾಗುವುದು.ಜೂನ್ 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.